Home 🎬 Bollywood 🎵 Pakistani 🎤 English Pop

Ninnindale

👤 Sonu Nigam 🎼 Soft zxx Sonu Nigam, Vol. 1 ⏱️ 4:58
🎵 2314 characters
⏱️ 4:58 duration
🆔 ID: 6743152

📜 Lyrics

ನಿನ್ನಿಂದಲೇ... ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ... ನಿನ್ನಿಂದಲೇ ಮಾನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲಿ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ

ನಿನ್ನಿಂದಲೇ... ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ... ನಿನ್ನಿಂದಲೇ ಮಾನಸಿಂದು ಕುಣಿದಾಡಿದೆ

ಇರುಳಲ್ಲಿ ಜ್ವರದಂತೆ ಕಾಡಿ ಈಗ
ಹಾಯಾಗಿ ನಿಂತಿರುವ ಸರಿಯೇನು
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿಯೇನು
ಈ ಮಾಯೆಗೆ ಈ ಮರುಳಿಗೆ ನಿನ್ನಿಂದ ಕಳೆ ಬಂದಿದೆ

ನಿನ್ನಿಂದಲೇ... ನಿನ್ನಿಂದಲೇ ಕನಸೊಂದು ಶುರುವಾಗಿದೆ

ಹೋದಲ್ಲಿ ಬಂದಲ್ಲಿ ಎಲ್ಲಾ ನಿನ್ನ
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟ
ನನಗೇನೋ ಅಂದಂತೆ ಅನುಮಾನ
ಕಣ್ಣಿಂದಲೇ ಸದ್ದಿಲ್ಲದೇ ಮುದ್ದಾದ ಕರೆ ಬಂದಿದೆ

ನಿನ್ನಿಂದಲೇ... ನಿನ್ನಿಂದಲೇ ಕನಸೊಂದು ಶುರುವಾಗಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲ
ನನ್ನೆದುರಲ್ಲಿ ನೀ ಹೀಗೆ ಬಂದಾಗಲೇ
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ

ನಿನ್ನಿಂದಲೇ... ನಿನ್ನಿಂದಲೇ ಕನಸೊಂದು ಶುರುವಾಗಿದೆ
ನಿನ್ನಿಂದಲೇ... ನಿನ್ನಿಂದಲೇ ಮಾನಸಿಂದು ಕುಣಿದಾಡಿದೆ

⭐ Rate These Lyrics

Average: 0.0/5 • 0 ratings